Translate in your Language

Wednesday, September 18, 2013

ಡಾ.ವಿಷ್ಣುವರ್ಧನ್ ಅವರ 64ನೇ ಹುಟ್ಟುಹಬ್ಬದ ಸವಿ ನೆನಪಿನಲ್ಲಿ

Dr. Vishnuvardhan
ಡಾ.ವಿಷ್ಣುವರ್ಧನ್ (ಜನನ: ಸೆಪ್ಟೆಂಬರ್ 18, 1950 | ಮರಣ :ಡಿಸೆಂಬರ್ 30, 2009) ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರು.ಸಂಪತ್ ಕುಮಾರ್ ಎಂಬುದು ಇವರ ಮೂಲ ಹೆಸರು. ಸಾಹಸಸಿಂಹ ಎಂಬ ಬಿರುದು ಪಡೆದ ಡಾ.ವಿಷ್ಣುವರ್ಧನ್ ಇದುವರೆಗೆ ಒಟ್ಟು ಸುಮಾರು ೨೦೦ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರ ವೊದಲ ಚಿತ್ರ ಎಸ್ ಎಲ್ ಭೈರಪ್ಪನವರ ಕಾದಂಬರಿಯಾಧಾರಿತ ವಂಶವೃಕ್ಷ. ಇದರಲ್ಲಿ ಸಣ್ಣ ಪಾತ್ರ ವಹಿಸಿದ್ದರು.


ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನಿತ್ತು ಗೌರವಿಸಿದೆ. ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ, ವಿಷ್ಣುವರ್ಧನ್ -ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿಗೆ ಅವರಿಗೆ ಸಲ್ಲುತ್ತದೆ.



ಬಂನ್ನಂಜೆ ಗೋವಿಂದಾಚಾರ್ಯಾರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ "೩೨೧" ಬಳಸುತ್ತಿದ್ದರು.

Sunday, September 1, 2013

ತ್ರಿವೇಣಿ ಅವರ ಹುಟ್ಟು ಹಬ್ಬದ ನೆನಪಿನಲ್ಲಿ

Triveni
ತ್ರಿವೇಣಿಯವರು ಕನ್ನಡದ ನವೋದಯದ ಮಾರ್ಗದಲ್ಲಿ ಬರೆಯಲು ಪ್ರಾರಂಭಿಸಿದ ಪ್ರಮುಖ ಕಾದಂಬರಿಕಾರರು. ಅವರು ತಮ್ಮ ಕಥೆ ಕಾದಂಬರಿಗಳ ಮೂಲಕ ಪ್ರಗತಿಪರ ಧೋರಣೆಯನ್ನು ಪ್ರತಿಪಾದಿಸಿದ ಬರಹಗಾರ್ತಿಯರಲ್ಲಿ ಪ್ರಮುಖರು.  ಸುಮಾರು ಒಂದು ದಶಕದ ಅವಧಿಯಲ್ಲಿ ರಚಿತವಾದ ಅವರ ಕಥೆ-ಕಾದಂಬರಿಗಳು ಕನ್ನಡದಲ್ಲಿ ಓದುಗರ ಒಂದು ವರ್ಗವನ್ನೇ ಸೃಷ್ಟಿಸಿತು. 

ಬಿ. ಎಂ. ಶ್ರೀ ಅವರ ತಮ್ಮ ಬಿ. ಎಂ. ಕೃಷ್ಣಸ್ವಾಮಿಯವರ ಎರಡನೆಯ ಮಗಳಾದ ತ್ರಿವೇಣಿ ಅವರು ಜನಿಸಿದ್ದು ಸೆಪ್ಟೆಂಬರ್ 1, 1928ರಲ್ಲಿ.  ಅವರ ಹುಟ್ಟು ಹೆಸರು ಭಾಗೀರಥಿ.  ಅವರು ಶಾಲೆಗೆ ಸೇರಿದಾಗ ಅವರ ಹೆಸರು ‘ಅನಸೂಯ’ ಎಂದಾಯಿತು.   ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. 1947ರಲ್ಲಿ ಮಹಾರಾಜಾ ಕಾಲೇಜಿನಿಂದ ಮನ:ಶಾಸ್ತ್ರದಲ್ಲಿ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು.   ಅಂದಿನ ದಿನಗಳಲ್ಲಿ ನಮಗೆ ಶಾರದಾ ವಿಲಾಸ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಶ್ರೀ ಶಂಕರ್ ಅವರ ಪತಿ.  ಮದುವೆಯ ನಂತರ ‘ಅನಸೂಯ ಶಂಕರ್’ ಆದರು.  ಮನೆಯೊಳಗಿನ ಅನಸೂಯ ಶಂಕರ್ ಸಣ್ಣಕಥೆಗಳ ಮೂಲಕ ಕನ್ನಡ ಸಾಹಿತ್ಯ ರಂಗವನ್ನು ಪ್ರವೇಶಿಸಿ ಕಾದಂಬರಗಾರ್ತಿಯಾಗಿ ‘ತ್ರಿವೇಣಿ’ ಎಂಬ ಕಾವ್ಯನಾಮದಿಂದ ಪ್ರಖ್ಯಾತರಾದರು.

 ‘ಶರಪಂಜರ, ‘ಬೆಳ್ಳಿಮೋಡ’, ‘ಕೀಲುಗೊಂಬೆ, ‘ಹೃದಯ ಗೀತೆ, ‘ಬೆಕ್ಕಿನಕಣ್ಣು’, ‘ಬಾನುಬೆಳಗಿತು, ‘ಅವಳ ಮನೆ’, ‘ಕಾಶೀಯಾತ್ರೆ, ‘ಹಣ್ಣೆಲೆ ಚಿಗುರಿದಾಗ’, ‘ಹೂವು ಹಣ್ಣು’,  ‘ಮುಕ್ತಿ’,  ‘ದೂರದ ಬೆಟ್ಟ’,  ‘ಅಪಸ್ವರ’, ‘ಅಪಜಯ’, ‘ತಾವರೆ ಕೊಳ’, ‘ಸೋತು ಗೆದ್ದವಳು’, ‘ಕಂಕಣ’, ‘ಮುಚ್ಚಿದ ಬಾಗಿಲು’, ‘ಮೊದಲ ಹೆಜ್ಜೆ’, ‘ವಸಂತಗಾನ’, ‘ಅವಳ ಮಗಳು’ ಇವು ತ್ರಿವೇಣಿಯವರ  ಕಾದಂಬರಿಗಳಾಗಿವೆ.