Dr. Vishnuvardhan |
ನಾಯಕನ ಪಾತ್ರದಲ್ಲಿ ಇವರ ಮೊದಲ ಚಿತ್ರ ೧೯೭೨ ರಲ್ಲಿ ಬಿಡುಗಡೆಯಾದ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು. ಬೆಂಗಳೂರು ವಿಶ್ವವಿದ್ಯಾಲಯವು ೨೦೦೫ನೇ ವರ್ಷದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪದವಿಯನ್ನಿತ್ತು ಗೌರವಿಸಿದೆ. ನಟನೆಯಲ್ಲದೇ, ಕಿಲಾಡಿ ಕಿಟ್ಟು, ನಾಗ ಕಾಳ ಭೈರವ, ಸಾಹಸಸಿಂಹ , ಜಿಮ್ಮಿಗಲ್ಲು, ಖೈದಿ ಮೋಜುಗಾರ ಸೊಗಸುಗಾರ, ವಿಷ್ಣುಸೇನಾ ಇವೇ ಮೊದಲಾದ ಕೆಲವು ಚಿತ್ರಗಳಲ್ಲಿ ಹಿನ್ನೆಲೆ ಗಾಯನವನ್ನೂ ಕೂಡ ಮಾಡಿದ್ದಾರೆ, ವಿಷ್ಣುವರ್ಧನ್ -ಸುಹಾಸಿನಿ, ವಿಷ್ಣುವರ್ಧನ್-ಮಾಧವಿ ಜೋಡಿ ಕನ್ನಡ ಚಿತ್ರರಂಗದ ಅಪೂರ್ವ ಜೋಡಿಯೆಂದು ಹೆಸರಾಗಿದೆ. ಹಾಗೆಯೇ ವಿಷ್ಣು ಅವರ ಹೆಚ್ಚಿನ ಚಿತ್ರದಲ್ಲಿ ನಟಿಸಿದ ಕೀರ್ತಿ ನಟಿ ಆರತಿಗೆ ಅವರಿಗೆ ಸಲ್ಲುತ್ತದೆ.
ಬಂನ್ನಂಜೆ ಗೋವಿಂದಾಚಾರ್ಯಾರು ಇವರ ಆದ್ಯಾತ್ಮಿಕ ಗುರುವಾಗಿದ್ದರು, ಸಂಖ್ಯಾಭವಿಷ್ಯಶಾಸ್ತ್ರವನ್ನು ನಂಬುತ್ತಿದ್ದ ಇವರು ತಮ್ಮ ಕಾರಿನ ನಂಬರಾಗಿ ಮತ್ತು ಮೊಬೈಲ್ ನ ಕೊನೆಯ ಸಂಖ್ಯೆಯಾಗಿ "೩೨೧" ಬಳಸುತ್ತಿದ್ದರು.
೧೯೮೦ರ ದಶಕದಲ್ಲಿ ಕಿರುತೆರೆಯಲ್ಲಿ ಪ್ರಸಾರಗೊಂಡ ಶಂಕರ್ ನಾಗ್ ನಿರ್ದೇಶನದ ಜನಪ್ರಿಯ ಧಾರಾವಾಹಿ 'ಮಾಲ್ಗುಡಿ ಡೇಸ್'ನ ಕಂತೊಂದರಲ್ಲಿ (ರುಪೀಸ್ ಫಾರ್ಟಿ-ಫೈವ್ ಎ ಮಂತ್) ವಿಷ್ಣುವರ್ಧನ್ ನಟಿಸಿದ್ದರು. ಕನ್ನಡ ಚಿತ್ರರಂಗದಲ್ಲೆ ಅತಿ ಹೆಚ್ಚು ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. (ಸುಮಾರು ೧೪ ಚಿತ್ರಗಳು)
ಬಾಲ್ಯ ಜೀವನ
ಡಾ. ವಿಷ್ಣುವರ್ಧನ್ಅವರು ಮೈಸೂರಿನಲ್ಲಿ ಹೆಚ್.ಎಲ್.ನಾರಾಯಣರಾವ್ ಮತ್ತು ಕಾಮಾಕ್ಷಮ್ಮ ಎಂಬ ದಂಪತಿಗಳಿಗೆ ಜನಿಸಿದರು. ಇವರ ತಂದೆ ಕಲಾವಿದರು, ಸಂಗೀತ ನಿರ್ದೇಶಕರು ಮತ್ತು ಸಂಭಾಷಣೆಕಾರರು ಆಗಿದ್ದರು. ಇವರ ಕುಟುಂಬದವರು ಮೈಸೂರಿನ ಚಾಮುಂಡಿಪುರಂನಲ್ಲಿ ವಾಸಿಸುತ್ತಿದ್ದರು. ಇವರಿಗೆ ೬ ಸಹೋದರ/ಸಹೋದರಿಯರು. ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಣವನ್ನು ಬೆಂಗಳೂರಿನ ಕನ್ನಡ ಮಾದರಿ ಶಾಲೆಯಲ್ಲಿ ಮುಗಿಸಿದರು. ತಮ್ಮ ಪ್ರೌಢಶಾಲಾ ಶಿಕ್ಷಣ ಮತ್ತು ಪದವಿಯನ್ನು ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನಲ್ಲಿ ಪಡೆದುಕೊಂಡರು.
ವಿಷ್ಣುವರ್ಧನ್ ದಕ್ಷಿಣ ಭಾರತದ ಖ್ಯಾತ ನಟಿ ಭಾರತಿ ಅವರನ್ನು ಮದುವೆಯಾದರು. ಯಾವಾಗಲೂ ವಿವಾದಗಳಿಂದ ದೂರವಿರುತಿದ್ದರು ಅವರು ಸಾಮಾನ್ಯವಾಗಿ ಅಹಿಂಸೆ ಪ್ರತಿಪಾದಿಸಿದರು. ಅವರು ಉದ್ಯಮದಲ್ಲಿ ಅನೇಕ ಸ್ನೇಹಿತರನ್ನು ಹೊಂದಿದ್ದರು ಮತ್ತು ಯಾರಿಗಾದರೂ ಸಹಾಯದ ಅಗತ್ಯವಿದೆ ಎಂದು ತಿಳಿದಾಗ ನೆರವು ನೀಡಿದ್ದಾರೆ. ಕನ್ನಡ ಚಿತ್ರರ೦ಗದಲ್ಲಿ ಅತಿ ಹೆಚು ಅಭಿಮಾನಿ ಹೋ೦ದಿರುವ ಅದ್ಬುತ ನಟ.
ಡಾ. ವಿಷ್ಣುವರ್ಧನ್ ಅಭಿನಯದ ಸಂಪೂಣ೯ ಚಿತ್ರಗಳು
No comments:
Post a Comment