Translate in your Language

Showing posts with label ಜ್ಞಾನಪೀಠ ಪ್ರಶಸ್ತಿ. Show all posts
Showing posts with label ಜ್ಞಾನಪೀಠ ಪ್ರಶಸ್ತಿ. Show all posts

Friday, August 15, 2014

ಜ್ಞಾನಪೀಠ ಪ್ರಶಸ್ತಿ


ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨ ೧೯೬೧ ರಲ್ಲಿ ಸ್ಥಾಪಿಸಿದರು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು. ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರುಪಾಯಿ ಚೆಕ್ ಹಾಗು ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.

ಜ್ಞಾನಪೀಠದ ಹಿನ್ನೆಲೆ