Translate in your Language

Wednesday, December 4, 2013

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನವರಿಗೆ 75 ನೇ ಹುಟ್ಟು ಹಬ್ಬದ ಶುಭಾಶಯಗಳು

Shimogga Subbanna
ಶಿವಮೊಗ್ಗ ಸುಬ್ಬಣ್ಣ - ಕನ್ನಡದ ಸುಗಮ ಸಂಗೀತ ಕ್ಷೇತ್ರದ ಹಿರಿಯ ಗಾಯಕರಲ್ಲಿ ಒಬ್ಬರಾಗಿದ್ದಾರೆ.ಸುಬ್ಬಣ್ಣ ಅವರ ನಿಜ ನಾಮಧೇಯ "ಜಿ.ಸುಬ್ರಹ್ಮಣ್ಯಂ ".ಶ್ರೀ ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಮುದ್ದಿನ ಮಗನಾದ ಸುಬ್ಬಣ್ಣ. ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ ೧೯೩೮ರಲ್ಲಿ ಜನಿಸಿದವರು. ಮನೆಯಲ್ಲಿ ಪ್ರತಿದಿನ ಪೂಜೆ, ಪುರಸ್ಕಾರ, ವೇದ ಮಂತ್ರಗಳ ಝೇಂಕಾರ ಕೇಳಿ ಬೆಳೆದವರು. ಇವರ ತಾತ ಶಾಮಣ್ಣನವರು ಸಂಗೀತದಲ್ಲಿ ಘನ ವಿದ್ವಾಂಸರು.

ಅವರ ಬಳಿಯಲ್ಲಿಯೇ ತಮ್ಮ ಪ್ರಾಥಮಿಕ ಸಂಗೀತಾಭ್ಯಾಸ ಆರಂಭಿಸಿದರು. ಇವರೊಂದಿಗೆ ಹೆಸರಾಂತ ಗಾಯಕಿ ಕರ್ನಾಟಕದ ಕೋಗಿಲೆ ಬಿ.ಕೆ. ಸುಮಿತ್ರಾ ಅವರೂ ಸೇರಿ ಕೆಲವು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡಿದರು. ನಂತರ ತಮ್ಮ ವ್ಯಾಸಂಗದ ಕಡೆ ಗಮನ ಹರಿಸಿದ ಸುಬ್ಬಣ್ಣ ಬಿ.ಎ.,ಬಿ.ಕಾಂ.,ಎಲ್.ಎಲ್.ಬಿ.,ಪದವೀದರರು.ವಕೀಲರಾಗಿ ವ್ರತ್ತಿ ಬದುಕು ಆರಂಭಿಸಿದ ಇವರು ಬಳಿಕ ನೋಟರಿಯಾಗಿ ನೇಮಕಗೊಂಡು ಕೆಲವು ವರ್ಷಗಳ ಕಾಲ ಸಂಗೀತದ ಕಡೆ ಮುಖ ಮಾಡದಿದ್ದರೂ, ರಕ್ತಗತವಾಗಿದ್ದ ಸಂಗೀತ ಆಗಾಗ ಇವರನ್ನು ಎಚ್ಚರಿಸಿ ಶಾಲಾ ಸಮಾರಂಭಗಳಲ್ಲಿ ಹಾಡುವಂತೆ ಪ್ರೇರೇಪಿಸುತ್ತಿತ್ತು. ಇದರಿಂದಾಗಿ ಶಾಲಾ ದಿನಗಳಲ್ಲಿ ಹಲವಾರು ಪ್ರಶಸ್ತಿ ಪಡೆದು, ಹಾಡಿನ ಸುಬ್ಬಣ್ಣ ಎಂದೆನಿಸಿಕೊಂಡರು.ಮುಂದೆ ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ ೧೯೬೩ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು.

Tuesday, December 3, 2013

ಗಿರೀಶ್ ಕಾಸರವಳ್ಳಿ ಅವರಿಗೆ ಹುಟ್ಟು ಹಬ್ಬದ ಸಿಹಿ ಹಾರೈಕೆಗಳು

Born:3rd December 1950
Girish Kaasaravalli
ಭಾರತದ ಅತ್ಯಂತ ಪ್ರತಿಭಾನಿತ್ವ ಚಲನಚಿತ್ರ ನಿರ್ದೇಶಕರಲ್ಲೊಬ್ಬರು.ಮಲೆನಾಡಿನ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಕಾಸರವಳ್ಳಿಯಲ್ಲಿ ೧೯೫೦ರಲ್ಲಿ ಜನಿಸಿದ ಇವರು ಮಣಿಪಾಲದಲ್ಲಿ ಬಿ,ಫಾರ್ಮ್ ಪದವಿ ಮುಗಿಸಿ ಪುಣೆಯ ರಾಷ್ಟ್ರೀಯ ಚಲನಚಿತ್ರ ತರಬೇತಿ ಸಂಸ್ಥೆ ಯಲ್ಲಿ ನಿರ್ದೇಶನ ವಿಭಾಗದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಗಿರೀಶ್ ಕಾಸರವಳ್ಳಿಯವರು ತಮ್ಮ ೨೭ ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ ೧೨ ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ, ಹಲವಾರು ರಾಷ್ಟ್ರೀಯ ಹಾಗು ಅ೦ತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಚಿತ್ರಗಳು ಅನೇಕ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿಯೂ ಸಹ ಪ್ರದರ್ಶಿತವಾಗಿದೆ. ಸಮಾನಾಂತರ ಚಿತ್ರ ಆಂದೋಲನದ ಬಾವುಟವನ್ನು ಹಾರಿಸುತ್ತ ಶ್ರೀಯುತರು ಜನಪ್ರಿಯ ಅಥವಾ ವಾಣಿಜ್ಯಮಯ ಚಿತ್ರಗಳಿಂದ ಮೊದಲಿನಿಂದಲು ದೂರ ಇದ್ದಾರೆ.

Sunday, December 1, 2013

ಪುಟ್ಟಣ್ಣ ಕಣಗಾಲ್ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ


Puttanna Kanagaal
ಎಸ್.ಆರ್.ಪುಟ್ಟಣ್ಣ ಕಣಗಾಲ್ (ಡಿಸೆಂಬರ್ ೧, ೧೯೩೩ - ಜೂನ್ ೫, ೧೯೮೫) ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು. ಹಿಂದಿ, ಮಲಯಾಳಂ ಭಾಷೆಗಳ ಕೆಲವು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು ಕನ್ನಡಿಗರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಕಣಗಾಲ್, ಕನ್ನಡ ಸಿನಿಮಾಕ್ಕೆ ಹೊಸ ರೂಪ ತಂದವರು.

ಆರಂಭದ ದಿನಗಳು
ಕರ್ನಾಟಕದ ಪುಟ್ಟಣ್ಣ ರವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಗ್ರಾಮದಲ್ಲಿ.ಇವರ ಮೊದಲ ಹೆಸರು "ಶುಬ್ರವೇಷ್ಠಿ ರಾಮಸ್ವಾಮಯ್ಯ ಸೀತಾರಾಮ ಶರ್ಮ" ಮುಂದೆ ಆದದ್ದು ಎಸ್‌.ಆರ್‌.ಪುಟ್ಟಣ್ಣ ಕಣಗಾಲ್‌. . ಕನ್ನಡ ಚಿತ್ರರಂಗದ ಚಿತ್ರಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಇವರ ಸಹೋದರರು.

ಚಿತ್ರರಂಗ
ಪುಟ್ಟಣ್ಣ ರವರು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಗ್ರಾಮದವರು ಪುಟ್ಟಣ್ಣ ರವಚಿತ್ರರಂಗಕ್ಕೆ ಬರುವ ಮುನ್ನ ಇವರು ಹಲವು ನೆಲೆಗಳಲ್ಲಿ ದುಡಿದಿದ್ದರು. ನಾಟಕ ಕಂಪೆನಿ,ಡ್ರೈವರ್, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ, ನಿರ್ಮಾಪಕರಲ್ಲೊಬ್ಬರಾದ ಬಿ.ಆರ್.ಪಂತುಲು ಅವರ ಬಳಿ ೧೯೫೪ರಲ್ಲಿ ಡೈಲಾಗ್ ಕೋಚ್ ಆಗಿ ಸೇರಿದ ಪುಟ್ಟಣ್ಣ ನಂತರದ ದಿನಗಳಲ್ಲಿ " ಪದ್ಮಿನಿ ಪಿಕ್ಚರ್ಸ್"ನ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದರು. ಕಾದಂಬರಿ ಆಧಾರಿತ ಚಿತ್ರಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದರು. ಪುಟ್ಟಣ್ಣನವರ ವೃತ್ತಿ ಜೀವನದ ಮೊದಲ ಚಿತ್ರ'ಸ್ಕೂಲ್‍ಮಾಸ್ಟರ್' (೧೯೬೪). ಪುಟ್ಟಣ್ಣನವರು ರಷ್ಯಾ ಪ್ರವಾಸ ಮಾಡಿ ಸಾಕಷ್ಟು ದೇಶಗಳನ್ನು ಸುತ್ತಿ ಕೋಶಗಳನ್ನು ಓದಿ, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪುಟ್ಟಣ್ಣನವರ ಚಿತ್ರಗಳ ಮೂಲಕ ಬೆಳಕಿಗೆ ಬಂದ,ಪ್ರಸಿದ್ಧರಾದ ಚಿತ್ರಕಲಾವಿದರು ಅನೇಕ. ಆ ಪೈಕಿ ನಾಯಕಿ ನಟಿಯರಲ್ಲಿ ಕಲ್ಪನಾ, ಆರತಿ, ಪದ್ಮಾ ವಾಸಂತಿ ಹಾಗೂ ಅಪರ್ಣಾ ಪ್ರಮುಖರು. ನಾಯಕ ನಟರಲ್ಲಿ ವಿಷ್ಣುವರ್ಧನ್, ರಾಮಕೃಷ್ಣ, ಜೈಜಗದೀಶ್, ಅಂಬರೀಶ್, ಶ್ರೀನಾಥ್ ಶ್ರೀಧರ್ ಮೊದಲಾದವರು ಇದ್ದಾರೆ.

Wednesday, November 27, 2013

ತೀ ನಂ ಶ್ರೀ ಅವರು ಹುಟ್ಟಿದ ದಿನದ ಸವಿ ನೆನಪಿನಲ್ಲಿ

Ti. Na.Srikanthaiah
(ನವಂಬರ್ ೨೬, ೧೯೦೬ - ಸಪ್ಟಂಬರ್ ೭, ೧೯೬೬) ಪ್ರೊಫೆಸರ್ ತೀರ್ಥಪುರ ನಂಜುಂಡಯ್ಯ ಶ್ರೀಕಂಠಯ್ಯ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು, ಹಾಗೂ ಕನ್ನಡದ ಶ್ರೇಷ್ಠ ವಿದ್ವಾಂಸ ಹಾಗೂ ವಿಮರ್ಶಕರಾಗಿದ್ದರು. ಸೃಜನಶೀಲ ಲೇಖಕರಾಗಿದ್ದ ಅವರ ಸಂಶೋಧನಾತ್ಮಕ ಬರವಣಿಗೆಗಳಲ್ಲಿಯೂ ಕಾವ್ಯಸ್ಪರ್ಶವನ್ನು ಕಾಣಬಹುದಾಗಿತ್ತು. 

ಅವರು ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಆಗಿದ್ದುದಲ್ಲದೆ ಕಲಾನಿಕಾಯದ ಡೀನ್ ಆಗಿದ್ದರು. ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕನ್ನಡ ವಿಭಾಗದ ಮೊಟ್ಟ ಮೊದಲ ಪ್ರಾಧ್ಯಾಪಕರೂ ಆಗಿದ್ದರು. 

ಅವರು ಆದರ್ಶ ಪ್ರಾಧ್ಯಾಪಕರು ಮತ್ತು ಶ್ರೇಷ್ಠ ವಾಗ್ಮಿಯೆಂದು ಪ್ರಸಿದ್ಧರಾಗಿದ್ದರು. ಇಂದು ಜೀವನದ ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಹಲವಾರು ಜನ ಮೇಧಾವಿಗಳು ತೀ.ನಂ.ಶ್ರೀ ಅವರ ಶಿಷ್ಯರಾಗಿದ್ದವರು. ತೀ.ನಂ.ಶ್ರೀ ಅವರು ಕಾವ್ಯಮೀಮಾಂಸೆ, ಸಾಹಿತ್ಯ ವಿಮರ್ಶೆ, ಛಂದಸ್ಸು, ಕಾವ್ಯ, ಪ್ರಬಂಧ ಸಾಹಿತ್ಯ, ಅನುವಾದ ಸಾಹಿತ್ಯ, ಗ್ರಂಥ ಸಂಪಾದನೆ ಮತ್ತು ಭಾಷಾವಿಜ್ಞಾನ - ಈ ವಿಷಯಗಳಲ್ಲಿ ವಿಶೇಷವಾದ ತಜ್ಞತೆಯನ್ನು ಪಡೆದಿದ್ದು, ಈ ಕ್ಷೇತ್ರಗಳನ್ನು ಶ್ರೀಮಂತಗೊಳಿಸಿದ್ದಾರೆ.

Saturday, November 23, 2013

ಪಿ.ಶೇಷಾದ್ರಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು

P Sheshadri

ಶೇಷಾದ್ರಿ ಅವರು ಹುಟ್ಟಿದ್ದು ತುಮಕೂರು ಜಿಲ್ಲೆ ದಂಡಿನಶಿವರದಲ್ಲಿ 1963 ನವೆಂಬರ್ 23ರಂದು. 

ಇವರು ಈಗಾಗಲೇ ಏಳು ಚಿತ್ರಗಳನ್ನು ನಿರ್ದೇಶಿಸಿದ್ದು, ಈ ಏಳೂ ಚಿತ್ರಗಳೂ ರಾಷ್ಟ್ರಪ್ರಶಸ್ತಿ ಪಡೆದಿವೆ.

‘ಮುನ್ನುಡಿ' ಪಿ. ಶೇಷಾದ್ರಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರ. 2000ದ ಇಸವಿಯಲ್ಲಿ ತೆರೆಗೆ ಬಂದ ಈ ಚಿತ್ರ ಕನ್ನಡ ಚಿತ್ರರಂಗದಲ್ಲಿ ಬಹು ಚರ್ಚಿತವಾದ ಚಿತ್ರ. ರಾಷ್ಟ್ರಮಟ್ಟದಲ್ಲಿ ಎರಡು, ರಾಜ್ಯಮಟ್ಟದಲ್ಲಿ ಆರು ಪ್ರಶಸ್ತಿಗಳನ್ನು ಪಡೆದು, ಹಲವಾರು ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶಿತವಾಯಿತು.

ಮರುವರ್ಷವೇ ಬಂದ ಪ್ರಕಾಶ್ ರೈ ಅಭಿನಯದ `ಅತಿಥಿ' ಮತ್ತೊಮ್ಮೆ ರಾಷ್ಟ್ರಪ್ರಶಸ್ತಿ ಪಡೆಯಿತು.

2004ರಲ್ಲಿ ಬಂದ `ಬೇರು' ಮೂರನೇ ರಾಷ್ಟ್ರಪ್ರಶಸಿ ಪಡೆದು, ಸತತ ಮೂರು ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಎಂಬ ಖ್ಯಾತಿಗೆ ಕಾರಣವಾಯಿತು. ನಂತರ 2005ರಲ್ಲಿ ತೆರೆಗೆ ಬಂದ ಜಯಮಾಲ ನಿರ್ಮಾಣದ `ತುತ್ತೂರಿ' ಮಕ್ಕಳ ಚಿತ್ರ ಕೂಡ ರಾಷ್ಟ್ರಪ್ರಶಸ್ತಿ ಪಡೆಯಿತಲ್ಲದೆ, ಜಪಾನ್ ದೇಶದ ಟೋಕಿಯೋ ಚಿತ್ರೋತ್ಸವದಲ್ಲಿ `ಅರ್ಥ್‌ವಿಷನ್ ಪ್ರಶಸ್ತಿ' ಪಡೆಯಿತು.

Thursday, November 21, 2013

ಕನ್ನಡದ ಮೊದಲ ಕಾದಂಬರಿ "ಮಾಡಿದ್ದುಣ್ಣೋ ಮಹರಾಯ" ಬರೆದ "ಎಮ್ ಎಸ್ ಪುಟ್ಟಣ್ಣ" ಅವರ ಹುಟ್ಟಿದ ದಿನದ ಸವಿ ನೆನಪಿನಲ್ಲಿ


ಎಂ. ಎಸ್. ಪುಟ್ಟಣ್ಣ ಕನ್ನಡದ ಮುನ್ನಡೆಗಾಗಿ ದುಡಿದ ಹಿರಿಯ ಮಹನೀಯರಲ್ಲಿ ಒಬ್ಬರು. ಅವರು ಜನಿಸಿದ್ದು ನವೆಂಬರ್ 21, 1854ರಲ್ಲಿ. ಚಿಕ್ಕಮಗುವಾಗಿರುವಾಗಲೇ ತಾಯಿ ತೀರಿಕೊಂಡರು. ತಂದೆ ಜಿಗುಪ್ಸೆಯಿಂದ ಕಾಶಿಗೆ ಹೋಗಿ ಸನ್ಯಾಸಿಯಾದವರು ಮಗನನ್ನು ನೋಡಲು ಬರಲೇ ಇಲ್ಲ. ಬಂಧುಗಳ ಆಶ್ರಯದಲ್ಲಿ ಬೆಳೆದರು. ಅವರ ನಿಜ ನಾಮಧೇಯ ಲಕ್ಷ್ಮೀನರಸಿಂಹ ಶಾಸ್ತ್ರಿ. ಎಲ್ಲರೂ ಮಗುವಾಗಿದ್ದಾಗ ಪುಟ್ಟಣ್ಣ ಎನ್ನುತ್ತಿದ್ದುದು ಹಾಗೇ ಉಳಿಯಿತು. ಸಂಪ್ರದಾಯ ಕುಟುಂಬದ ಹಿನ್ನಲೆಯಲ್ಲಿ ವಿದ್ಯಾಬ್ಯಾಸದ ಪ್ರಾರಂಭ ಪಂತರ ಖಾಸಗಿ ಮಠಗಳಲ್ಲಿ ನಡೆಯಿತು. ಅನಂತರ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹೋಧ್ಯಾಪಕರಾಗಿ ನೇಮಕಗೊಂಡರು. ವೃತ್ತಿಯೊಂದಿಗೆ ಅಧ್ಯಯನಕ್ಕೂ ಮನಸ್ಸು ಕೊಟ್ಟು ಮದರಾಸಿನಲ್ಲಿ ಬಿ.ಎ. ಪದವಿ ಪಡೆದರು. ಮುಂದೆ ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1897ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ರಾಜ್ಯದ ಹಲವೆಡೆಗಳಲ್ಲಿ ಅಮಲ್ದಾರರಾಗಿ ಸೇವೆ ಸಲ್ಲಿಸಿದರು. ಬೆಂಗಳೂರಿನ ತೆರೆಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು.

Monday, November 11, 2013

"ರಘು ದೀಕ್ಷಿತ್" ಎಂಬ ಅಪ್ರತಿಮ ಗಾಯಕನಿಗೆ ಹುಟ್ಟುಹಬ್ಬದ ಶುಭಾಶಯಗಳು

ಮೈಸೂರಿನಲ್ಲಿ ಹುಟ್ಟಿ ಬೆಳೆದ ಈ ಅದ್ಭುತ ಸಂಗೀತ ಮಾಂತ್ರಿಕ ಹುಟ್ಟಿದ್ದು ನವೆಂಬರ್ 11, 1974 ರಲ್ಲಿ
"ನಿನ್ನಾ ಪೂಜೆಗೆ ಬಂದೇ ಮಾದೇಶ್ವರಾ," ಎಂಬ ಹಾಡಿನಿಂದ ಕನ್ನಡಿಗರಿಗೆ ಪರಿಚಿತವಾದ ಕಂಚಿನ ಕಂಠದ "ರಘು ದೀಕ್ಷಿತ್" ಎಂಬ  ಅಚ್ಚ ಕನ್ನಡ ಪ್ರತಿಭೆ ನಮ್ಮ ರಾಜ್ಯ/ದೇಶದ ಗಡಿಗಳನ್ನು ದಾಟಿ ಈಗ ಅಂತರರಾಷ್ಟೀಯ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ತೋರಿಸಲು ಹೊರಟಿದ್ದಾರೆ. ಅವರು ಅನೇಕ ದೇಶಗಳಲ್ಲಿ ಈಗಾಗಲೇ ನಮ್ಮ ಕನ್ನಡದ "ಶಿಶುನಾಳ ಷರೀಫ"ರ ಹಾಡುಗಳನ್ನು ಪಾಶ್ಚಿಮಾತ್ಯ ಸಂಗೀತದ ಧಾಟಿಯಲ್ಲಿ ಪ್ರಚಾರ ಪಡಿಸಿದ್ದಾರೆ.