Translate in your Language

Monday, July 28, 2014

ಬಿ.ಆರ್. ಪಂತುಲು ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

ಜನನ: 1911 ಜುಲೈ 28 - ನಿಧನ: ಅಕ್ಟೋಬರ್ 8, 1974

“ಸ್ವಾಮಿ ದೇವನೆ ಲೋಕಪಾಲನೆ ತೇನಮೋಸ್ತು ನಮೋಸ್ತುತೆ” ಎಂದು ಮಕ್ಕಳಿಗೆ ಪಾಠ ಹೇಳಿಕೊಟ್ಟು ನಮಗೆ ಇಷ್ಟವಾಗಿರುವ ಮೇಷ್ಟರ ಹಾಗೆ ಇವರೂ ಕೂಡಾ ಎಂದು ಭಾವ ಹುಟ್ಟಿಸಿದ ‘ಸ್ಕೂಲ್ ಮಾಸ್ಟರ್’ ಎಂದೇ ಪ್ರಿಯರಾದ ಬಿ.ಆರ್. ಪಂತುಲು ಅವರು ಕನ್ನಡಿಗರಿಗೆ ಮಾತ್ರವಲ್ಲ, ದಕ್ಷಿಣ ಭಾರತ ಚಿತ್ರರಂಗಕ್ಕೇ ಒಂದು ಅವಿಸ್ಮರಣೀಯ ನೆನಪು. ಅವರು ಶ್ರೀಕೃಷ್ಣದೇವರಾಯ ಚಿತ್ರದಲ್ಲಿ ಮಂತ್ರಿ ತಿಮ್ಮರಸುವಾಗಿ ಕಂಗೊಳಿಸಿದ ರೀತಿ ಅವಿಸ್ಮರಣೀಯವಾದುದು. “ಒಂದರಿಂದ ಇಪ್ಪತ್ತೊಂದರವರೆಗೆ ಜಂಜಾಟ, ಬಂಡಾಟ” ಎಂದು ಅವರ ಮೊದಲ ತೇದಿಯಲ್ಲಿ ಮೂಡಿದ ಹಾಡು, ಅಂದಿನ ಎಲ್ಲಾ ಮಧ್ಯಮ ಮತ್ತು ಕೆಳವರ್ಗದ ಜನಕ್ಕೆ ಇದು ನಮ್ಮ ಜೀವನವೇ ಎಂದು ಅನ್ವಯಿಸಿಕೊಳ್ಳುವಷ್ಟು ಪ್ರಖ್ಯಾತವಾಗಿತ್ತು. ಕರ್ಣನಂತಹವನಿಗೇ ಹೀಗಾಯಿತಲ್ಲಾ ಎಂದು ಸ್ವಯಂ ಕೃಷ್ಣನೇ ಶೋಕಿಸುವ ಈ ಸೃಷ್ಟಿಯ ಪರಿ ಆತ್ಮೀಯವಾಗಿತ್ತು. ಕನ್ನಡ ಚಿತ್ರರಂಗದ ಸುವರ್ಣಯುಗದ ಹರಿಕಾರ, ಬೆಳ್ಳಿತೆರೆಯ ಗಾರುಡಿಗರೆಂದೇ ಅವರು ಪ್ರಸಿದ್ಧಿ. 

Friday, July 25, 2014

ಎಚ್ ಎಲ್ ಎನ್ ಸಿಂಹ ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ


ಜನನ:ಜುಲೈ 25, 1906


ಡಾ. ರಾಜ್ ಕುಮಾರ್ ಅಲ್ಲದೆ ಡಾ. ಜಿ.ವಿ.ಅಯ್ಯರ್, ನರಸಿಂಹ ರಾಜು, ರಾಜಾ ಸುಲೋಚನ, ಡಾ. ಹೊನ್ನಪ್ಪ ಭಾಗವತರ್, ರಾಜಾ ಶಂಕರ್, ಬಿ, ಹನುಮಂತಾಚಾರ್ ಇಂತಹ ಮಹಾನ್ ಪ್ರತಿಭೆಗಳ ಗಣಿಗಳನ್ನು ಸಹಾ ಸಿಂಹರು ಚಿತ್ರರಂಗಕ್ಕೆ ತಂದರು.

ಎಚ್ ಎಲ್ ಎನ್ ಸಿಂಹ ಅವರು ಜನಿಸಿದ್ದು ಜುಲೈ ೨೫, ೧೯೦೬ರ ವರ್ಷದಲ್ಲಿ. ಊರು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾದಹಳ್ಳಿ ಗ್ರಾಮ. ತಂದೆ ನರಸಿಂಹಯ್ಯನವರು ಮತ್ತು ತಾಯಿ ಲಕ್ಷ್ಮಮ್ಮನವರು.

ಸಿಂಹರು ಶಾಲೆಯಲ್ಲಿ ಓದಿದ್ದಕ್ಕಿಂತ ರಂಗದಲ್ಲಿ ಕಲಿತದ್ದೇ ಹೆಚ್ಚು. ನಾಟಕ ಶೀರೋಮಣಿ ವರದಾಚಾರ್ಯರ ನಾಟಕ ಕಂಪನಿಯಲ್ಲಿ ಬಾಲನಟನಾಗಿ ಅಭಿನಯಿಸತೊಡಗಿದ ಅವರು ಭಕ್ತ ಮಾರ್ಕಂಡೇಯ ನಾಟಕದಲ್ಲಿ ಮಾರ್ಕಂಡೇಯನಾಗಿ ಅದ್ಭುತ ನಟನಾಕೌಶಲ ಪ್ರದರ್ಶಿಸಿದ್ದರು.

ಯುವಕರಾಗಿದ್ದ ಸಿಂಹ ಅವರು ತಾವೇ ಹಲವಾರು ನಾಟಕಗಳನ್ನು ಬರೆದು ಪ್ರಸಿದ್ಧ ರಂಗಭೂಮಿ ಕಲಾವಿದರಾದ ಮಹಮ್ಮದ್ ಪೀರ್ ಅವರೊಂದಿಗೆ ರಂಗಪ್ರದರ್ಶನಗಳಿಗೆ ಅಳವಡಿಸಿದರು. ಮುಂದೆ ಟೈಗರ್ ವರದಾಚಾರ್ಯರ ಕಂಪೆನಿಯನ್ನು ಸೇರಿದ ಸಿಂಹರು ಹಲವಾರು ಸಣ್ಣ ಸಣ್ಣ ಪಾತ್ರಗಳಲ್ಲಿ ಅಭಿನಯಿಸತೊಡಗಿದರು. ಈ ಈರ್ವರು ಸೇರಿ ಸ್ಥಾಪಿಸಿದ ಸಂಸ್ಥೆ 'ಚಂದ್ರಕಲಾ ನಾಟಕ ಮಂಡಳಿ'. ನಂತರದಲ್ಲಿ ಸಿ.ಬಿ. ಮಲ್ಲಪ್ಪ, ಗುರುಕರ್, ಗುಬ್ಬಿ, ಪೀರ್ ಮುಂತಾದ ನಾಟಕ ಕಂಪೆನಿಗಳಲ್ಲಿ ಸೇರಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುವುದರೊಂದಿಗೆ ಸಿಂಹರು ಪ್ರತಿಷ್ಟಿತ ನಟರಾಗಿ ಜನಪ್ರಿಯರಾದರು.

Thursday, July 24, 2014

ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

ಜನನ: 24 ಜುಲೈ, 1923 – ನಿಧನ:11 ಜುಲೈ, 1979
ಅಭಿನಯ ಹಾಸ್ಯದ ಮೂಲಕವೇ ಕನ್ನಡಚಿತ್ರ ರಸಿಕರನ್ನು ನಕ್ಕುನಗಿಸಿದ ಧೀಮಂತ ನಟ ನರಸಿಂಹರಾಜು. ಕನ್ನಡಚಿತ್ರರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ನರಸಿಂಹರಾಜು ಅವರು ಪ್ರಮುಖರು. 1926ರಿಂದ 1979ರವರೆಗೆ ರಂಗಭೂಮಿ ಹಾಗೂ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ನರಸಿಂಹರಾಜು ಹಾಸ್ಯನಟರಾಗಿ ಎಷ್ಟರ ಮಟ್ಟಿಗೆ ಬೆಳೆದರೆಂದರೆ, ರಾಜ್ ಕುಮಾರ್ ನಾಯಕ ನಟರಾದರೆ, ಅವರ ಗೆಳೆಯನ ಪಾತ್ರಕ್ಕೆ ನರಸಿಂಹರಾಜು ಆಯ್ಕೆಯಾಗುತ್ತಿದ್ದರು. ನಾಯಕನ ಗೆಳೆಯ, ಸಹೋದ್ಯೋಗಿ, ಸಹಾಯಕ ಹೀಗೆ ಯಾವುದಾದರೂ ಒಂದು ಪಾತ್ರ ಸೃಷ್ಟಿಸಿ ನರಸಿಂಹ ರಾಜು ಅವರಿಗೆ ಅವಕಾಶ ನೀಡಲಾಗುತ್ತಿತ್ತು.

ನರಸಿಂಹರಾಜು ಅವರು ಹುಟ್ಟಿದ್ದು ತುಮಕೂರು ಜಿಲ್ಲೆ ತಿಪಟೂರಿನಲ್ಲಿ.  ಚಿಕ್ಕಪ್ಪನ ಪ್ರೋತ್ಸಾಹದಿಂದ ಚಿಕ್ಕಂದಿನಲ್ಲಿಯೇ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಬಾಲನಟನಾಗಿ ಖ್ಯಾತಿ ಪಡೆದರು. 1954ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ನರಸಿಂಹ ರಾಜು ನಟಿಸಿದ ಮೊದಲ ಚಿತ್ರ ಬೇಡರಕಣ್ಣಪ್ಪ. ರಾಜ್ ಕುಮಾರ್ ನಾಯಕ ನಟರಾದ ಮೊದಲ ಚಿತ್ರವೂ ಆದ ಬೇಡರ ಕಣ್ಣಪ್ಪದಲ್ಲಿ  ಕಾಶಿ ಪಾತ್ರದಲ್ಲಿ ಕಾಣಿಸಿಕೊಂಡ ನರಸಿಂಹ ರಾಜು ಮತ್ತೆ ಹಿಂತಿರುಗಿ ನೋಡಲೇ ಇಲ್ಲ.

Friday, July 4, 2014

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಹುಟ್ಟು ಹಬ್ಬದ ನೆನಪಿನಲ್ಲಿ

Goruru Ramaswamy Ayyengar
ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್  ಅವರು 1904ರ ಜುಲೈ 4ರಂದು ಹಾಸನ ಜಿಲ್ಲೆಯ ಗೊರೂರು ಗ್ರಾಮದಲ್ಲಿ ಜನಿಸಿದರು.  ಅವರ ತಂದೆ ಶ್ರೀನಿವಾಸ ಅಯ್ಯಂಗಾರ್, ತಾಯಿ ಲಕ್ಷಮ್ಮನವರು.  ತಮ್ಮ ಹಳ್ಳಿಯಲ್ಲಿ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಗೊರೂರರು ಹಾಸನದ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾಗ ಗಾಂಧೀಜಿಯ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದರು.

 ಅನಂತರ ಅವರು ಗಾಂಧೀಜಿಯ ಆಶ್ರಮವನ್ನು ಸೇರಿ, ಗುಜರಾತಿನ ವಿದ್ಯಾಪೀಠದ ವಿದ್ಯಾರ್ಥಿಯಾದರು.  ಬಳಿಕ ಮದ್ರಾಸಿನ "ಲೋಕಮಿತ್ರ" ಮತ್ತು "ಭಾರತಿ" ಪತ್ರಿಕೆಗಳ ಕನ್ನಡ ಸಮಾಚಾರ ಲೇಖಕರಾಗಿ ಸ್ವಲ್ಪಕಾಲ ಕೆಲಸಮಾಡಿ, ಕೆಂಗೇರಿಯ ಗುರುಕುಲಾಶ್ರಮವನ್ನು ಸೇರಿದರು.  ಹರಿಜನೋದ್ಧಾರ ಅದರ ಮುಖ್ಯ ಕಾರ್ಯವಾಗಿತ್ತು.   ಅದನ್ನು ಗೊರೂರರು ಶ್ರದ್ಧೆಯಿಂದ ನಿರ್ವಹಿಸಿದರು.  ಆಮೇಲೆ ಬೆಂಗಳೂರಿನ ಅಖಿಲ ಭಾರತ ಚರಕ ಸಂಘದ ಖಾದಿ ವಸ್ತ್ರಾಲಯದ ಸಂಚಾಲಕರಾದರು.  ಅಲ್ಲಿಯೇ ಅವರ ಸಾಹಿತ್ಯ ಸೇವೆ ಮೊದಲಾಯಿತು.  1933ರಲ್ಲಿ ಗೊರೂರರು ತಮ್ಮ ಗ್ರಾಮಕ್ಕೆ ಮರಳಿ, ಮೈಸೂರು ಗ್ರಾಮ ಸೇವಾಸಂಘವನ್ನು ಸ್ಥಾಪಿಸಿ, ಖಾದಿ ಪ್ರಚಾರ, ಹರಿಜನೋದ್ಧಾರ, ವಯಸ್ಕರ ಶಿಕ್ಷಣ, ಗ್ರಾಮ ಕೈಗಾರಿಕೆಗಳು ಮುಂತಾದ ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರು.  1942ರ "ಚಲೇ ಜಾವ್" ಚಳವಳಿಯಲ್ಲಿ ಅವರು ಭಾಗವಹಿಸಿ, ತುರಂಗವಾಸವನ್ನು ಅನುಭವಿಸಿದರು.  ಸ್ವಾತಂತ್ರ್ಯ ಬಂದ ಮೇಲೆ ಮೈಸೂರಿನಲ್ಲಿ ಪ್ರಜಾ ಸರ್ಕಾರ ಸ್ಥಾಪನೆಗಾಗಿ ನಡೆದ ಚಳವಳಿಯಲ್ಲೂ ಭಾಗವಹಿಸಿದರು.  ಅದು ಸ್ಥಾಪಿತವಾದ ಮೇಲೆ ಸುಮಾರು ಹನ್ನೆರಡು ವರ್ಷ ಕಾಲ ರಾಜ್ಯದ ವಿಧಾನಪರಿಷತ್ತಿನ ಸದಸ್ಯರಾಗಿದ್ದರು.  ಈ ಅವಧಿಯಲ್ಲಿ ಕರ್ನಾಟಕದ ಏಕೀಕರಣಕ್ಕಾಗಿ ಅವರು ದುಡಿದರು.

Friday, June 6, 2014

ಮಾಸ್ತಿ ವೆಂಕಟೇಶ ಅಯ್ಯಂಗಾರ-ಅವರ ಹುಟ್ಟು ಹಬ್ಬದ ಸವಿ ನೆನಪಿನಲ್ಲಿ

Masti Venkatesh Ayyengar
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ 6, 1891-ಜೂನ್ 6, 1986)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್.ಎ (೧೯೦೯), ಬಿ.ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು)

ಜೀವನ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಹಳ್ಳಿಯಲ್ಲಿ ೧೮೯೧ರ ಜೂನ್ ೬ರಂದು ಹುಟ್ಟಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ "ಪೆರಿಯಾತ್" ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು.

ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ 123ನೇ ಜನ್ಮದಿನದ ಸವಿನೆನಪುಗಳೊಂದಿಗೆ

ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧-ಜೂನ್ ೬ ೧೯೮೬)-Born: June 6, 1891-Died: June 6, 1986)
ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ
ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್.ಎ (೧೯೦೯), ಬಿ.ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು)

ಜೀವನ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಎಂಬ ಹಳ್ಳಿಯಲ್ಲಿ ೧೮೯೧ರ ಜೂನ್ ೬ರಂದು ಹುಟ್ಟಿದರು. ಅವರು ಹುಟ್ಟುವ ಕಾಲಕ್ಕೆ ಮನೆಯಲ್ಲಿ ಬಡತನವಿತ್ತು. ಒಂದು ಕಾಲಕ್ಕೆ ಶ್ರೀಮಂತಿಕೆಯಿಂದ ವಿಜೃಂಭಿಸಿದ ಕುಟುಂಬ ಅವರ ಪೂರ್ವಿಕರದು. ಮಾಸ್ತಿ ವೆಂಕಟೇಶ ಅಯ್ಯಂಗಾ ರ್ "ಪೆರಿಯಾತ್" ಎಂದರೆ ದೊಡ್ಡ ಮನೆಯವರು. ಅವರ ವಿದ್ಯಾಭ್ಯಾಸ ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಜರುಗಿತು. ಅವರ ಹಿರಿಯರು ಬಹು ಜನಕ್ಕೆ ಅನ್ನ ಹಾಕಿ ಹೆಸರು ಗಳಿಸಿದ್ದರಾದರೂ ಅವರು ವಾರದ ಮನೆಗಳಲ್ಲಿ ಊಟಮಾಡಿ ವಿದ್ಯಾಭ್ಯಾಸ ಮಾಡಬೇಕಾಯಿತು. ಹೊಂಗೇನಳ್ಳಿ, ಯಲಂದೂರು, ಶಿವಾರಪಟ್ಟಣ, ಮಳವಳ್ಳಿ, ಮೈಸೂರು, ಕಡೆಗೆ ಮದರಾಸು ಹೀಗೆ ನಾನಾ ಕಡೆಗಳಲ್ಲಿ ತಮ್ಮ ಬಂಧುಗಳ ನೆರವಿನಿಂದ ವಿದ್ಯಾಭ್ಯಾಸ ಮಾಡಿ ಎಂ.ಎ ಪದವಿ ಗಳಿಸಿದರು. ತಮ್ಮ ವಿದ್ಯಾಭ್ಯಾಸ ಕಾಲದಲ್ಲಿ ಮಾಸ್ತಿ ಯಾವ ಪರೀಕ್ಷೆಯಲ್ಲೂ ಪ್ರಥಮ ಸ್ಥಾನ ವನ್ನು ಬೇರೆಯವರಿಗೆ ಬಿಟ್ಟುಕೊಡಲಿಲ್ಲ. ಮದ್ರಾಸಿನಲ್ಲಿ ಇಂಗ್ಲೀಷ್ ಎಂ.ಎ ಮಾಡಿಕೊಂಡು ಚಿನ್ನದ ಪದಕ ಗಳಿಸಿದ ಮಾಸ್ತಿ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸುಮಾರು ಒಂದೂವರೆ ತಿಂಗಳು ಉಪಾಧ್ಯಾಯರಾಗಿದ್ದು ಬೆಂಗಳೂರಿಗೆ ಬಂದು ಸಿವಿಲ್ ಪರೀಕ್ಷೆಗೆ ಕುಳಿತು ಅಲ್ಲಿಯೂ ಪ್ರಥಮರಾಗಿ ತೇರ್ಗಡೆಯಾದರು. ಸರ್ಕಾರದಲ್ಲಿ ಅಸಿಸ್ಟೆಂಟ್ ಕಮೀಶನರಾಗಿ ಕೆಲಸಕ್ಕೆ ಸೇರಿ ಸಮರ್ಪಕವಾಗಿ ಕೆಲಸ ನಿರ್ವಹಿಸಿದರು. ಸಾಹಿತ್ಯ ರಚನೆ ಅವರ ಪ್ರವೃತ್ತಿಯಾಗಿ ಬೆಳೆಯಿತು.

 ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ ೧೯೪೩ ರವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ.

೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು.

ಸಾಹಿತ್ಯ
೧೯೧೦ ರಲ್ಲಿ ಬರೆದ ರಂಗನ ಮದುವೆ ಎಂಬ ಸಣ್ಣ ಕಥೆಗಳ ಸಂಗ್ರಹದಿಂದ ಹಿಡಿದು ಅವರು ನಿಧನರಾಗುವುದಕ್ಕೆ ಕೆಲವೇ ತಿಂಗಳುಗಳ ಹಿಂದೆ ಪ್ರಕಟವಾದ 'ಮಾತುಗಾರ ರಾಮಣ್ಣ' ಎಂಬ ಕೃತಿಯವರೆಗೆ ಅವರು ರಚಿಸಿದ ಕೃತಿಗಳ ಸಂಖ್ಯೆ ೧೨೩. ಇದರಲ್ಲಿ ಸಣ್ಣಕತೆಗಳು, ಕಾದಂಬರಿಗಳು, ನಾಟಕಗಳು, ವಿಮರ್ಶೆಗಳು, ಪ್ರಬಂಧಗಳು, ಧಾರ್ಮಿಕ ಕೃತಿಗಳು, ಅನುವಾದ, "ಜೀವನ" ಎಂಬ ಅವರೇ ನಡೆಸುತ್ತಿದ್ದ ಪತ್ರಿಕೆಯಲ್ಲಿ ಬರೆದ ಸಂಪಾದಕೀಯ ಲೇಖನಗಳು, ಕವಿತೆಗಳ ಸಂಗ್ರಹ, ಕಾವ್ಯ ಸೇರಿವೆ.
೨೦ನೆಯ ಶತಮಾನದ ಆರಂಭದ ಕಾಲ. ಕನ್ನಡ ಭಾಷೆಗೆ ಹೇಳಿಕೊಳ್ಳುವಂಥ ಪ್ರೋತ್ಸಾಹವಿರಲಿಲ್ಲ. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಸಾಹಿತ್ಯದಲ್ಲಿ ಗಮನಾರ್ಹ ಕೆಲಸವಾಗಬೇಕಾಗಿದ್ದ ಕಾಲದಲ್ಲಿ ಮಾಸ್ತಿ ಸಾಹಿತ್ಯ ರಚನೆಯ ಕೆಲಸವನ್ನು ಕೈಗೊಂಡರು. ಸಣ್ಣ ಕತೆಗಳ ರಚನೆ ಅವರು ಪ್ರಧಾನವಾಗಿ ಆರಿಸಿಕೊಂಡ ಸಾಹಿತ್ಯ ಪ್ರಕಾರ. ಶ್ರೀನಿವಾಸ ಎಂಬ ಕಾವ್ಯನಾಮದಲ್ಲಿ ಮಾಸ್ತಿ ನೂರಾರು ಸಣ್ಣ ಕತೆಗಳನ್ನು ಬರೆದರು. ಹಲವಾರು ಕಥಾ ಸಂಕಲನಗಳನ್ನು ಪ್ರಕಟಿಸಿದರು. ಅವರ ಒಂದು ಸಣ್ಣಕಥೆಯನ್ನು ರಾಜಾಜಿಯವರು ತಮಿಳಿಗೆ ಅನುವಾದಿಸಿದರು. ಇಂಗ್ಲೀಷ್ ಹಾಗೂ ಇತರ ಭಾರತೀಯ ಭಾಷೆಗಳಿಗೆ ಮಾಸ್ತಿ ಅವರ ಸಣ್ಣ ಕತೆಗಳು ಅನುವಾದಗೊಂಡಿವೆ. ದೂರದರ್ಶನದಲ್ಲಿ ಕೆಲವು ಕತೆಗಳು ಅಭಿನಯಿಸಲ್ಪಟ್ಟು ಪ್ರಸಾರವಾಗಿವೆ. ಕಥೆ ಹೇಳುವುದರಲ್ಲಿ ಮಾಸ್ತಿ ಎತ್ತಿದ ಕೈ. ಅವರ ಕಥೆಗಳನ್ನು ಓದುತ್ತಿದ್ದರೆ ಅವು ಕಣ್ಣಿಗೆ ಕಟ್ಟಿದಂತಿರುತ್ತವೆ. "ಸುಬ್ಬಣ್ಣ" ಅವರ ಒಂದು ಖ್ಯಾತ ನೀಳ್ಗತೆ. ಅಪಾರ ಮಾನವೀಯ ಅಂತಃಕರಣವನ್ನು ಕತೆಯಲ್ಲಿ ತುಳುಕಿಸಿದ ಅವರು ಕಥೆಗಳ ರಚನೆಗೆ ಬಳಸಿದ ತಂತ್ರ ಅಪರೂಪದ್ದಾಗಿದೆ. ಸಣ್ಣ ಕಥೆಗಳ ಜನಕರೆಂದೇ ಅವರಿಗೆ ಕರೆಯುತ್ತಿದ್ದ ರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಅವರ ಕಥೆಗಳ ಸಂಕಲನಗಳಿಗೆ ಲಭಿಸಿತು. ಕಥೆ ಹೇಳುವುದು ಒಂದು ಪುಣ್ಯದ ಕೆಲಸವೆಂದು ಅವರು ಭಾವಿಸಿದ್ದರು.
ಮಾಸ್ತಿ ಕಥೆಗಳನ್ನು ಬರೆದಂತೆಯೇ ಕಾದಂಬರಿ, ಕವಿತೆ, ಪ್ರಬಂಧ ಇವುಗಳನ್ನೂ ಬರೆದರು, ನಾಟಕಗಳನ್ನೂ ರಚಿಸಿದರು. ಅವರ ಎಲ್ಲ ಕೃತಿಗಳಲ್ಲೂ ಕುಶಲತೆ, ಸೌಮ್ಯತೆ, ಜೀವನ ದರ್ಶನಗಳನ್ನು ಸ್ಪಷ್ಟವಾಗಿ ಕಾಣಬಹುದು. "ಭಾರತತೀರ್ಥ", "ಆದಿಕವಿ ವಾಲ್ಮೀಕಿ" ಇವು ಭಾರತ ರಾಮಾಯಣಗಳನ್ನು ಕುರಿತು ಬರೆದಿರುವ ಗ್ರಂಥಗಳಾದರೆ "ಶ್ರೀರಾಮ ಪಟ್ಟಾಭಿಷೇಕ" ಅವರ ಒಂದು ಕಾವ್ಯ. ರವೀಂದ್ರನಾಥ ಠಾಕೂರ್, ರಾಮಕೃಷ್ಣ ಪರಮಹಂಸರ ಜೀವನ ಚರಿತ್ರೆಗಳನ್ನೂ, ಪುರಂದರದಾಸ, ಕನಕದಾಸ, ಅನಾರ್ಕಳಿ, ತಿರುಪಾಣಿ, ಶಿವಾಜಿ ಮೊದಲಾದ ನಾಟಕಗಳನ್ನೂ, ಷೇಕ್ಸ್‌ಪಿಯರನ ನಾಟಕಗಳ ಅನುವಾದಗಳನ್ನೂ ಮಾಸ್ತಿ ಪ್ರಕಟಿಸಿದ್ದಾರೆ.
ಮಾಸ್ತಿ ಬರೆದ ಕಾದಂಬರಿಗಳು ಎರಡು. ಜ್ಞಾನಪೀಠ ಪ್ರಶಸ್ತಿ ಗಳಿಸಿದ ಕೃತಿ ಚಿಕವೀರ ರಾಜೇಂದ್ರ - ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತದ್ದು, ಮತ್ತೊಂದು "ಚನ್ನಬಸವನಾಯಕ".
"ಭಾವ" - ಮಾಸ್ತಿ ಅವರ ಆತ್ಮಕಥೆ ಇರುವ ಮೂರು ಸಂಪುಟಗಳ ಗ್ರಂಥ.

ಗೌರವಗಳು
ಮಾಸ್ತಿ ಅವರಿಗೆ ಸಂದ ಗೌರವ, ಪ್ರಶಸ್ತಿಗಳು ಅಪಾರ. "ಮಾಸ್ತಿ ಕನ್ನಡದ ಆಸ್ತಿ" ಎಂಬ ಹೇಳಿಕೆ ಒಂದು ನಾಣ್ಣುಡಿಯಾಗಿದೆ.
ಎಲ್ಲ ಸಾಹಿತಿಗಳಿಗೂ ಅವರು "ಅಣ್ಣ ಮಾಸ್ತಿ"ಯಾಗಿದ್ದರು. ವರಕವಿ ದ ರಾ ಬೇಂದ್ರೆ ಮಾಸ್ತಿಯವರನ್ನು ಹಿರಿಯಣ್ಣ ಎಂದು ಗೌರವಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಾಸ್ತಿ ಸೇವೆ ಸಲ್ಲಿಸಿದರು.
೧೯೨೯ರಲ್ಲಿ ಬೆಳಗಾವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಕರ್ನಾಟಕ ವಿಶ್ವವಿದ್ಯಾಲಯ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು.
ಮೈಸೂರು ಮಹಾರಾಜರು "ರಾಜಸೇವಾ ಪ್ರಸಕ್ತ" ಎಂದು ಗೌರವಿಸಿದ್ದರು.
೧೯೭೨ರಲ್ಲಿ "ಶ್ರೀನಿವಾಸ" ಎಂಬ ಅವರ ಅಭಿನಂದನಾ ಗ್ರಂಥ ಪ್ರಕಟವಾಯಿತು.
ಮಾಸ್ತಿ ಕನ್ನಡಿಗರಿಗೆ ಒಂದು ಆದರ್ಶ. ಎಂಥ ಕಷ್ಟ ಕಾಲದಲ್ಲೂ ಅವರು ಜೀವನವನ್ನೆದುರಿಸಿದರು. ಸಾಹಿತ್ಯ ರಚಿಸಿದಂತೆಯೇ ಸಾಹಿತ್ಯ ಪೋಷಕರಾದರು. ಜಿ ಪಿ ರಾಜರತ್ನಂ, ದ ರಾ ಬೇಂದ್ರೆಯಂತಹವರಿಗೆ ಅವರು ಆದರ್ಶರಾಗಿದ್ದರು.

ಮುಖ್ಯ ಕೃತಿಗಳು
ಸಣ್ಣ ಕತೆಗಳ ಸಂಗ್ರಹ
ರಂಗನ ಮದುವೆ
ಮಾತುಗಾರ ರಾಮಣ್ಣ

ನೀಳ್ಗತೆ
ಸುಬ್ಬಣ್ಣ (೧೯೨೮)
,,,* ಶೇಷಮ್ಮ(೧೯೭೬)

ಕಾವ್ಯ ಸಂಕಲನಗಳು
ಬಿನ್ನಹ(೧೯೨೨)
ಅರುಣ(೧೯೨೪)
ತಾವರೆ(೧೯೩೦)
ಸಂಕ್ರಾಂತಿ(೧೯೬೯)
ನವರಾತ್ರಿ(೫ ಭಾಗ ೧೯೪೪-೧೯೫೩)
ಜೀವನ ಚರಿತ್ರೆ
ರವೀಂದ್ರನಾಥ ಠಾಕೂರ(೧೯೩೫)
ಶ್ರೀ ರಾಮಕೃಷ್ಣ(೧೯೩೬)
ಪ್ರಬಂಧ
ಕನ್ನಡದ ಸೇವೆ(೧೯೩೦)
ವಿಮರ್ಶೆ (೪ ಸಂಪುಟ ೧೯೨೮-೧೯೩೯)
ಜನತೆಯ ಸಂಸ್ಕೃತಿ(೧೯೩೧)
ಜನಪದ ಸಾಹಿತ್ಯ(೧೯೩೭)
ಆರಂಭದ ಆಂಗ್ಲ ಸಾಹಿತ್ಯ(೧೯೭೯)
ನಾಟಕ
ಶಾಂತಾ(೧೯೨೩)
ತಾಳೀಕೋಟೆ(೧೯೨೯)
ಶಿವಛತ್ರಪತಿ(೧೯೩೨)
ಯಶೋಧರಾ(೧೯೩೩)
ಕಾಕನಕೋಟೆ(೧೯೩೮)
ಕಾದಂಬರಿ
ಚೆನ್ನಬಸವ ನಾಯಕ(೧೯೫೦)
ಚಿಕವೀರ ರಾಜೇಂದ್ರ(೧೯೫೬)

Saturday, May 17, 2014

ಡಾ.ಅನುಪಮಾ ನಿರಂಜನ ಅವರ ಹುಟ್ಟು ಹಬ್ಬದ ನೆನಪಿನಲ್ಲಿ

Dr. Anupama Niranjan
ಕನ್ನಡ ನಾಡಿನಲ್ಲಿ ಪ್ರಸಿದ್ಧ ಬರಹಗಾರ್ತಿಯಾಗಿ, ವೈದ್ಯರಾಗಿ ಜನಾನುರಾಗಿಗಳಾಗಿ ಅಪಾರವಾದ ಪ್ರಸಿದ್ಧಿ ಪಡೆದು ಅನುಪಮ ಬಾಳ್ವೆ ನಡೆಸಿದ ಡಾ. ಅನುಪಮಾ ನಿರಂಜನ ಅವರು  1934ರ ಮೇ 17ರಂದು ತೀರ್ಥಹಳ್ಳಿಯಲ್ಲಿ  ಜನಿಸಿದರು.  ಆನುಪಮಾ ಅವರ ಮೊದಲಿನ ಹೆಸರು ವೆಂಕಟಲಕ್ಷ್ಮಿ. 

ವೃತ್ತಿಯಲ್ಲಿ ವೈದ್ಯರಾದ ಅನುಪಮಾ ಅವರು,
 ಕನ್ನಡ ಕಾದಂಬರಿ ಕ್ಷೇತ್ರವು ತನ್ನ ಆಳ ಅಗಲಗಳನ್ನು ವಿಸ್ತರಿಸಿಕೊಂಡು ಮುನ್ನಡೆಯುತ್ತಿರುವ ಸಂಧರ್ಭದಲ್ಲಿ ಆ ಕ್ಷೇತ್ರಕ್ಕೆ ಕಾಲಿಟ್ಟರು. ಒಬ್ಬ ಒಳ್ಳೆಯ ವೈದ್ಯರಾಗುವುದರ ಜೊತೆಗೆ ಗಟ್ಟಿ ಸಾಹಿತಿಯಾಗಿ ಬೆಳೆದುನಿಂತರು. ಕುಳಕುಂದ ಶಿವರಾಯರೆಂದೇ ಚಿರಪರಿಚಿತರಾಗಿದ್ದ ನಿರಂಜನ ಅವರೊಂದಿಗೆ ನಡೆದ ವಿವಾಹ,  ಅವರಿಗೆ ಲೇಖಕಿಯಾಗಿ ತಮ್ಮ  ಗುರಿಯನ್ನು ಸಾದಿಸುವಲ್ಲಿ ಮತ್ತಷ್ಟು ಸಹಕಾರಿಯಾಯಿತು.  ಡಾ.ಅನುಪಮಾ ನಿರಂಜನ ಅವರು ಬುದ್ದಿವಿಕಾಸಕ್ಕೆ ಪ್ರೇರಕವಾಗಬಲ್ಲ ವಿಚಾರ ಸಾಹಿತ್ಯದ ಜೊತೆಗೆ ವೈದ್ಯಕೀಯ ಗ್ರಂಥಗಳನ್ನು ಸಹ ರಚಿಸಿದರು.